ಕರಾವಳಿ ಭಾಗದಲ್ಲಿ ಇಂದಿನಿಂದ 1 ವಾರ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರಿನ ಅಬ್ಬರ ಶುರುವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ 1 ವಾರಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಹಾಗಾಗಿಯೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 3 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 14ರಂದು ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ 1 ವಾರ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ.

Kshetra Samachara

Kshetra Samachara

14 days ago

Cinque Terre

4.19 K

Cinque Terre

0