ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯ ಹಳೆಯಂಗಡಿ ಸಮೀಪದ ಕಲ್ಲಾಪು ಎಂಬಲ್ಲಿ ಭಾರಿ ಮಳೆಗೆ ವಿದ್ಯುತ್ ಕಂಬ ನೆಲಕ್ಕೆ ಉರುಳಿದ್ದು ಸ್ಥಳೀಯರ ಸಮಯಪ್ರಜ್ಞೆಯಿಂದ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ಹಳೆಯಂಗಡಿ ಸಮೀಪದ ಕಲ್ಲಾಪು ನಿವಾಸಿ ಆದಿಲ್ ಎಂಬುವವರ ಮನೆಯ ಮುಂಭಾಗದಲ್ಲಿ ಹಾದುಹೋದ ಹಳೆಯ ವಿದ್ಯುತ್ ಕಂಬ ನೆಲಕ್ಕುರುಳಿದ್ದು ವಿದ್ಯುತ್ ತಂತಿಗಳು ಮನೆಯ ಮುಂದೆ ಹಾಗೂ ಸಾರ್ವಜನಿಕರು ಹಾದುಹೋಗುವ ಜಾಗದಲ್ಲಿ ತುಂಡಾಗಿ ಬಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು.
ಕೂಡಲೇ ಕಾರ್ಯಪ್ರವೃತ್ತರಾದ ಆದಿಲ್ ಸ್ಥಳೀಯರಿಗೆ ಮಾಹಿತಿ ನೀಡಿ ಮೆಸ್ಕಾಂ ಕಚೇರಿಗೆ ದೂರವಾಣಿ ಮೂಲಕ ವಿದ್ಯುತ್ ಲೈನ್ ಕಡಿತಗೊಳಿಸಲು ತಿಳಿಸಿ ಬಾರಿ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Kshetra Samachara
04/09/2021 12:39 pm