ಮಂಗಳೂರು :ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮಳೆಯ ಅಬ್ಬರ ಜೋರಾಗಿದೆ. ಮಂಗಳೂರು ನಗರ ಸೇರಿ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ಸುಬ್ರಹ್ಮಣ್ಯ, ಮೂಡಬಿದ್ರೆ ಹೀಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆ ಅಬ್ಬರ ಜೋರಾಗಿತ್ತು.
ಸಂಜೆಯಾದರೂ ಮಳೆ ವಿರಮಿಸಲಿಲ್ಲ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.ವಾಯುಭಾರ ಕುಸಿತ ಪರಿಣಾಮ ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Kshetra Samachara
07/09/2021 05:59 pm