ಉಡುಪಿ: ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರೆದಿದ್ದು ಇವತ್ತೂ ಕೂಡ ಉಡುಪಿಯ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ.
ಕಳೆದ ನಾಲ್ಕು ದಿನದಿಂದ ಮತ್ತೆ ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಿದ್ದು ಇವತ್ತು ಹೆಬ್ರಿ ತಾಲೂಕಿನಾದ್ಯಂತ ಭಾರೀ ಮಳೆಯಾಗಿದೆ.ಹವಾಮಾನ ಇಲಾಖೆ ಒಂದು ವಾರಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿತ್ತು.ಜಿಲ್ಲೆಯಲ್ಲಿಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣಗೊಂಡಿದ್ದು ಮೀನುಗಾರಿಕೆಗೆ ತೆರಳಿದ್ದ ಆಳ ಸಮುದ್ರ ಬೋಟ್ ಗಳು ವಾಪಸಾಗುತ್ತಿವೆ.ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Kshetra Samachara
12/09/2021 05:02 pm