ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗಾಳಿ-ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ, ಮರಗಳು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಗಾಳಿ-ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿನ್ನೆ (ಮಂಗಳವಾರ) ರಾತ್ರಿಯಿಂದಲೇ ತುಂತುರು ಮಳೆಯಾಗುತ್ತಿದ್ದು, ಕೆಲವೆಡೆ ಗಾಳಿ ಮಳೆಯಾಗುತ್ತಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ನೆಲೆಸಿದೆ. ನಿನ್ನೆ ಸುರಿದ ಮಳೆಗೆ ಕುಂದಾಪುರ ಮತ್ತು ಬೈಂದೂರಿನಲ್ಲಿ ಹಾನಿ ಸಂಭವಿಸಿದ್ದು, ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮುಂದಿನ 24 ಗಂಟೆಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಗುರುವಾರ ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

06/10/2021 03:57 pm

Cinque Terre

3.89 K

Cinque Terre

0

ಸಂಬಂಧಿತ ಸುದ್ದಿ