ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಮಾನಂಪಾಡಿ ಶ್ರೀ ವೀರಭದ್ರ ದೇವಸ್ಥಾನದ ದ್ವಾರದ ಜಂಕ್ಷನ್ ಚಡಾವು ಬಳಿ ಮರವೊಂದು ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.
ಕೂಡಲೇ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಅವರ ಸೂಚನೆಯಂತೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಜಯಪ್ರಕಾಶ್, ನವೀನ್ ಚಂದ್ರ, ಕಿಶೋರ್ ಮತ್ತಿತರರು ಮರವನ್ನು ತೆರವು ಗೊಳಿಸಿದ್ದಾರೆ.
ಮರ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮುಲ್ಕಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಈ ಪರಿಸರದಲ್ಲಿ ಅನೇಕ ಅಪಾಯಕಾರಿ ಸ್ಥಿತಿಯಲ್ಲಿ ಮರಗಳಿದ್ದು, ಅವಘಡ ಸಂಭವಿಸುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
13/10/2021 10:14 am