ಹೆಬ್ರಿ: ಉಡುಪಿ ಜಿಲ್ಲೆಯಾದ್ಯಂತ ರಾತ್ರಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಹಲವೆಡೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು
ಧರೆಗುರುಳಿವೆ.
ಜಿಲ್ಲೆಯ ಹೆಬ್ರಿ ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು, ವಾಹನ ಸಂಚಾರಕ್ಕೆ ಕೆಲ ಕಾಲ ತೊಡಕು ಉಂಟಾಯಿತು. ಹೆಬ್ರಿಯ ಕಳ್ತೂರು ಪಂಚಾಯತ್‌ನವರು ಹಾಗೂ ಸ್ಥಳೀಯರು ಸೇರಿಕೊಂಡು, ಜೆಸಿಬಿ ಬಳಸಿ ಮರ ತೆರವುಗೊಳಿಸಿದರು.
ಇನ್ನು, ಗಾಳಿ- ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.
Kshetra Samachara
01/12/2021 11:26 am