ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ರೈಲು ಡಿಕ್ಕಿ ಹೊಡೆದು ಚಿರತೆ ಸಾವು !

ಬ್ರಹ್ಮಾವರ: ರೈಲು ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪ ಘಟನೆಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ರೈಲ್ವೆ ಬ್ರಿಡ್ಜ್ ನಿಂದ ಚಿರತೆ ಗದ್ದೆಗೆ ಎಸೆಯಲ್ಪಟ್ಟಿದೆ. ಆಹಾರ ಅರಸಿಕೊಂಡು ಬೆಟ್ಟದಿಂದ ಚಿರತೆ ಗ್ರಾಮದತ್ತ ಬಂದಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.

ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಚಿರತೆಯ ಮೃತದೇಹವನ್ನು ಪರಿಶೀಲನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಳನ್ನು ನಡೆಸಿ, ಅಂತ್ಯಸಂಸ್ಕಾರ ನಡೆಸುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/12/2021 01:24 pm

Cinque Terre

5.55 K

Cinque Terre

0

ಸಂಬಂಧಿತ ಸುದ್ದಿ