ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ.!

ಸುಳ್ಯ: ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ.

ಆನೆ ದಾಳಿಯಿಂದ ಗುರುಪ್ರಸಾದ್ ಎಂಬುವರಿಗೆ ಗಂಭೀರವಾಗಿ ಗಾಯವಾಗಿದೆ. ಹಾಲು ಸೊಸೈಟಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆನೆ ದಾಳಿ ನಡೆಸಿ ಯುವಕನನ್ನು ಸ್ವಲ್ಪ ದೂರ ಎಳೆದೊಯ್ದಿದೆ. ಇದನ್ನು ನೋಡಿದ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ ಯುವಕನನ್ನು ರಕ್ಷಿಸಿದ್ದಾರೆ. ಗಾಯಗೊಂಡ ಯುವಕನಿಗೆ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Edited By : Shivu K
Kshetra Samachara

Kshetra Samachara

13/03/2022 01:12 pm

Cinque Terre

8.25 K

Cinque Terre

0

ಸಂಬಂಧಿತ ಸುದ್ದಿ