ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಬಾವಿಗೆ ಬಿದ್ದ ಚಿರತೆ: ಎರಡೂವರೆ ಗಂಟೆ ಕಾರ್ಯಾಚರಣೆ ಬಳಿಕ ರಕ್ಷಣೆ

ಕುಂದಾಪುರ: ಕುಂದಾಪುರ ತಾಲೂಕಿನ ಕೆರಾಡಿಯ ಚಪ್ಪರಮಕ್ಕಿ ಗ್ರಾಮದಲ್ಲಿ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆಹಾರವನ್ನು ಅರಸಿ ನಾಡಿಗೆ ಬಂದ ಚಿರತೆ ಯಾವುದೋ ಪ್ರಾಣಿಯನ್ನು ಹಿಡಿಯುವ ಭರದಲ್ಲಿ ಆಯತಪ್ಪಿ ಬಾವಿಗೆ ಬಿದ್ದಿತ್ತು. ಪಕ್ಕದ ಮನೆಯವರು ಇದನ್ನು ಗಮನಿಸಿ ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಸುಮಾರು ಎರಡೂವರೆ ತಾಸು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ. ಬಳಿಕ ಸುರಕ್ಷಿತ ಪ್ರದೇಶದಲ್ಲಿ ಚಿರತೆಯನ್ನು ಬಿಡಲಾಗಿದೆ.

Edited By : Shivu K
Kshetra Samachara

Kshetra Samachara

28/03/2022 01:08 pm

Cinque Terre

14.02 K

Cinque Terre

0

ಸಂಬಂಧಿತ ಸುದ್ದಿ