ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ; ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ: 18 ರಂದು ರೆಡ್ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವುದಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೇ 17 ಮತ್ತು 19ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು 18ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಈ ಅವಧಿಯಲ್ಲಿ ಭಾರೀ ಗಾಳಿ ಸಹಿತ ಮಳೆ ಆಗಲಿದೆ. ಜನರು ನದಿ ಮತ್ತು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಅದೇರೀತಿ ಮೀನುಗಾರರು ಕಡಲಿಗಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ರವಾನಿಸಿದೆ.

Edited By : PublicNext Desk
Kshetra Samachara

Kshetra Samachara

16/05/2022 06:06 pm

Cinque Terre

4.48 K

Cinque Terre

0

ಸಂಬಂಧಿತ ಸುದ್ದಿ