ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ!
ಬೆಳಗ್ಗೆ ಬಂಟ್ವಾಳ, ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಲಘು ಕಂಪನದ ಅನುಭವ ಆಗಿದೆ. ಹಲವೆಡೆ ವಿಚಿತ್ರ ಶಬ್ದದೊಂದಿಗೆ ಭೂಮಿ ಕಂಪಿಸಿರುವ ಬಗ್ಗೆ ಸಾರ್ವಜನಿಕರು ಅನುಭವ ಹಂಚಿಕೊಂಡಿದ್ದಾರೆ.
ಕಲ್ಲುಗುಂಡಿ, ಸಂಪಾಜೆ, ಗೂನಡ್ಕ, ಅಡ್ತಲೆ, ಅರಂತೋಡು, ಅರಂಬೂರು, ಬಂಟ್ವಾಳ ತಾಲೂಕಿನ ಕೆಲವೆಡೆ ಮತ್ತಿತರ ಭಾಗಗಳಲ್ಲಿ ಗುಡುಗಿನ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ.
ಸುಳ್ಯ ನಗರ ವ್ಯಾಪ್ತಿಯಲ್ಲಿಯೂ ಲಘು ಕಂಪನ ಆಗಿದೆ. ಬೀರಮಂಗಲ ಭಾಗದಲ್ಲಿ ಗುಡುಗಿನ ಶಬ್ದದೊಂದಿಗೆ ಸುಮಾರು 4-5 ಸೆಕೆಂಡು ಕಂಪನ ಆಗಿದೆ.
PublicNext
25/06/2022 03:00 pm