ಸುಳ್ಯ: ಸುಳ್ಯ ತಾಲೂಕಿನಲ್ಲಿ ಇಂದು ಬೆಳಿಗ್ಗೆ ಉಂಟಾದ ಭೂ ಕಂಪನದ ಪ್ರಭಾವದಿಂದ ಗೂನಡ್ಕದಲ್ಲಿ ಬಿರುಕು ಬಿಟ್ಟಿರುವ ಮನೆಗೆ ಜನಪ್ರತಿನಿಧಿಗಳು, ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂ ಕಂಪಿಸಿದ ಪರಿಣಾಮದಿಂದ ಗೂನಡ್ಕದಲ್ಲಿರುವ
ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಅಬೂಸಾಲಿ ಅವರ ಮನೆಯ ಗೋಡೆಗಳಲ್ಲಿ ಅಲ್ಲಲ್ಲಿ ಬಿರಕು ಕಾಣಿಸಿಕೊಂಡಿದೆ.
ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಗ್ರಾಮ ಕರಣಿಕ ಮಿಯಾ ಸಾಬ್ ಮುಲ್ಲಾ, ತಾಲೂಕು ಕಚೇರಿಯ ನಾರಾಯಣ, ಎಎಸ್ಐ ರವೀಂದ್ರ ಮತ್ತಿತರರು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ಸದಸ್ಯರಾದ ಜಗದೀಶ್ ರೈ, ಎಸ್ ಕೆ ಹನೀಫ್, ವಿಜಯ ಮತ್ತಿತರರು ಭೇಟಿ ನೀಡಿದ್ದಾರೆ.
Kshetra Samachara
25/06/2022 04:37 pm