ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ನಾಡಪ್ರಭು ಕೆಂಪೇಗೌಡರ ಜನ್ಮ ದಿನಾಚರಣೆ- ಹಣ್ಣಿನ ಗಿಡಗಳ ವಿತರಣೆ

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಗೌಡರ ಯುವ ಸೇವಾ ಸಂಘ ಸುಳ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಇವರ ಜಂಟಿ ಆಶ್ರಯದಲ್ಲಿ ನಾಡಪ್ರಭು ‘ಕೆಂಪೇ ಗೌಡರ ಜನ್ಮ ದಿನಾಚರಣೆ ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉದ್ಘಾಟಿಸಿದರು.ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಮುಖ್ಯ ಭಾಷಣ ಮಾಡಿದರು‌. ತಹಶಿಲ್ದಾರ್ ಅನಿತಾಲಕ್ಷ್ಮಿ, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್‌ಕುಮಾರ್ ಕೆ.ಆರ್. ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೆಳ್ಯಪ್ಪ ಗೌಡ ಬಳ್ಳಡ್ಕ ಉಪಸ್ಥಿತರಿದ್ದರು. ಕೆಂಪೇಗೌಡರ ಜನ್ಮ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆಯ ಸಹಕಾರದಲ್ಲಿ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

Edited By : Vijay Kumar
Kshetra Samachara

Kshetra Samachara

27/06/2022 11:10 pm

Cinque Terre

4.14 K

Cinque Terre

0

ಸಂಬಂಧಿತ ಸುದ್ದಿ