ಬೆಳ್ಮಣ್: ಉಡುಪಿ ಜಿಲ್ಲೆಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ. ಇಲ್ಲಿನ ಸಂಕಲಕರಿಯದ ಗೋಕುಲನಗರ ನಿವಾಸಿ ರಾಜು ಭಂಡಾರಿ ಎಂಬುವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾಗಿದೆ.
ಸುಮಾರು 50 ಸಾವಿರ ರೂ. ನಷ್ಟ ಸಂಭವಿಸರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಿಂದ ಮನೆಮಂದಿಗೆ ಯಾವುದೇ ಗಾಯಗಳಾಗದೆ ಬಚಾವಾಗಿದ್ದಾರೆ. ಸ್ಥಳೀಯ ಕಂದಾಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
29/06/2022 03:07 pm