ಕುಂದಾಪುರ: ಕುಂದಾಪುರ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು ಗೋಪಾಡಿ ಕಾಂತೇಶ್ವರ ದೇವಸ್ಥಾನ ಸಮೀಪ ವಿವೇಕಾನಂದ ರಸ್ತೆಯ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಉಂಟಾಗಿದೆ.ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮಳೆಯ ನೀರು ತುಂಬಿ ಮನೆಗಳಿಗೆ ನುಗ್ಗಿ ಇಲ್ಲಿಯ ನಿವಾಸಿಗಳು ಪರದಾಡುವಂತಾಗಿದೆ.
ಸಂಬಂಧಪಟ್ಟ ಪಂಚಾಯತ್ ನ ಸದಸ್ಯರು, ಅಧ್ಯಕ್ಷರಿಗೆ ದೂರು ನೀಡದರೂ ಕೂಡ ಸ್ಪಂದಿಸುತ್ತಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಜಿಲ್ಲೆಯ ಉಡುಪಿ ಕಾರ್ಕಳ ಕಾಪು ತಾಲೂಕುಗಳಲ್ಲೂ ಅಲ್ಲಲ್ಲಿ ಮಳೆಯಿಂದ ಹಾನಿಯಾದ ಬಗ್ಗೆ ವರದಿಗಳಾಗಿವೆ.ತಗ್ಗುಪ್ರದೇಶದ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಕೆಲವೆಡೆ ಸಂಚಾರಕ್ಕೆ ತೊಂದರೆಯುಂಟಾಯಿತು.
Kshetra Samachara
30/06/2022 02:38 pm