ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಗುಡ್ಡದ ಮಣ್ಣು ಕುಸಿದು ನಿರ್ಮಾಣ ಹಂತದ ಮನೆಯೊಂದರ ಮೇಲೆ ಬಿದ್ದಿದೆ. ಈ ಘಟನೆ ಪುತ್ತೂರು ತಾಲೂಕಿನ ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಪಡ್ನೂರು ಎಂಬಲ್ಲಿ ನಡೆದಿದೆ.
ರಾಮ್ ಭಟ್ ಎನ್ನುವವರಿಗೆ ಸೇರಿದ ನಿರ್ಮಾಣ ಹಂತದ ಮನೆ ಇದಾಗಿದ್ದು, ಮನೆಯ ಹಿಂಭಾಗದಲ್ಲಿರುವ ಗುಡ್ಡದ ಮಣ್ಣು ಮನೆ ಮೇಲೆ ಕುಸಿದಿದ್ದು,ಇದೇ ರೀತಿ ಮಳೆ ಮುಂದುವರಿದಲ್ಲಿ, ಗುಡ್ಡದ ಮೇಲಿನ ಬಂಡೆಕಲ್ಲುಗಳೂ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ಹಾನಿಯಾಗುವ ಸಾಧ್ಯತೆಯಿದೆ.
Kshetra Samachara
01/07/2022 01:16 pm