ಕೋಟ: ಮಳೆಗಾಲ ಪ್ರಾರಂಭವಾಯಿತೆಂದರೆ ಸಾಕು, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಕಡಲ್ಕೊರೆತ ಸಾಮಾನ್ಯ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೋಟ ಹೋಬಳಿಯ ಕೋಡಿಕನ್ಯಾಣ ಹಾಗೂ ಮಣೂರು ಪಡುಕರೆಯಲ್ಲಿ ವಿಪರೀತ ಕಡಲ್ಕೊರೆತ ಉಂಟಾಗಿದೆ. ಇದರಿಂದಾಗಿ ಕಡಲ ತೀರವಾಸಿಗಳಲ್ಲಿ ಆತಂಕ ಎದುರಾಗಿದೆ.
ಮೊನ್ನೆಯಿಂದ ಸುರಿಯುತ್ತಿರುವ ಮಳೆಗೆ ಕಡಲು ಪ್ರಕ್ಷುಬ್ಧಗೊಂಡಿದ್ದು ಮಣೂರು ಪಡುಕರೆಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.ಇದರಿಂದ ಕಡಲ ತೀರಗಳಲ್ಲಿ ಮನೆ ಮಾಡಿಕೊಂಡವರಲ್ಲಿ ಆತಂಕ ಹೆಚ್ಚಾಗಿದೆ, ಮಾತ್ರವಲ್ಲ ಸಂಪರ್ಕ ರಸ್ತೆ ಕಡಿತವಾಗುವ ಭೀತಿ ಎದುರಾಗಿದೆ.
ಸ್ಥಳಕ್ಕೆ ಗ್ರಾ. ಪಂ. ಅಧಿಕಾರಿಗಳು ,ಪಿಡಿಒ ವಿ.ಎ. ಮತ್ತಿತರರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರ ಪರಿಹಾರ ಕ್ರಮ ಕೈಗೊಳ್ಳುವ ಮೂಲಕ ಆತಂಕ ದೂರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Kshetra Samachara
02/07/2022 07:46 pm