ಮಂಗಳೂರು: ಮಂಗಳೂರು ಹೊರವಲಯದ ಉಚ್ಚಿಲದ ಬಟ್ಟಪಾಡಿ ಸಮುದ್ರದಲ್ಲಿ ವಿದೇಶಿ ಹಡಗು ಮುಳುಗಡೆಯಿಂದ ಹಡಗಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಸಮುದ್ರದಲ್ಲಿ ಕಪ್ಪು ಬಣ್ಣದಲ್ಲಿ ಸಣ್ಣ ಪ್ರಮಾಣದ ತೈಲ ಸೋರಿಕೆ ಆಗಿರೋದು ಪತ್ತೆಯಾಗಿತ್ತು. ಸುಮಾರು 220 ಮೆಟ್ರಿಕ್ ಟನ್ ತೈಲ ಹೊಂದಿದ್ದ ಈ ವಿದೇಶಿ ಹಡಗಿನಲ್ಲಿ ಕಳೆದ ಮೂರು ದಿನಗಳ ಹಿಂದೆಯೇ ತೈಲ ಸೋರಿಕೆಯಾಗುತ್ತಿರುವ ಮಾಹಿತಿ ಸಿಕ್ಕಿತು.
ಈಗ ತೀರ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ತೈಲ ಸೋರಿಕೆಯಾಗಿ ಕೆಟ್ಟ ವಾಸನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಸಮುದ್ರದಲ್ಲಿ ತೈಲ ಸೇರಿಕೊಂಡು ಬಾವಿ ನೀರು ಸೇರಿ ಜಲಮೂಲಗಳು ಕಲುಷಿತವಾಗಿದೆ. ಇದರಿಂದ ಇಲ್ಲಿನ ಕೆಲ ಮನೆಗಳ ನಿವಾಸಿಗಳಿಗೆ ಬೇಧಿಯಾಗ್ತಿದೆ. ನಾಲ್ಕೈದು ಜನರಿಗೆ ಸಣ್ಣಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಇನ್ನು ಇಲ್ಲಿನ ಮೀನುಗಾರರು ಮೀನುಗಾರಿಕೆಗೆ ತೆರಳಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
Kshetra Samachara
02/07/2022 08:59 pm