ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಜಿಲ್ಲೆಯಲ್ಲಿ ಮುಂದುವರೆದ ಮಳೆ: ಐದು ಮನೆಗಳಿಗೆ ಹಾನಿ

ಕಾಪು : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಐದು ಮನೆಗಳಿಗೆ ಹಾನಿಯಾಗಿದ್ದು ಎರಡೂವರೆ ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದ್ದಾಗಿ ಅಂದಾಜಿಸಲಾಗಿದೆ. ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಶೇಖರ ಅಮೀನ್ ಎಂಬವರ ಮನೆಯ ಶೌಚಾಲಯಕ್ಕೆ ಹಾನಿಯಾಗಿದ್ದು 50 ಸಾವಿರ ರೂ.ನಷ್ಟವಾಗಿದೆ. ಕುರ್ಕಾಲು ಗ್ರಾಮದ ವಸಂತಿ ಎಂಬವರ ಮನೆ ಮೇಲೆ ಮರ ಬಿದ್ದು ಭಾಗಶ: ಹಾನಿಯಾಗಿದ್ದು 45,೦೦೦ ನಷ್ಟ ಉಂಟಾಗಿದೆ.

ಹೆಬ್ರಿ ತಾಲೂಕು ಶಿವಪುರದಲ್ಲಿ ಜಗದೀಶ್ ಶೆಟ್ಟಿ ಎಂಬವರ ವಾಸ್ತವ್ಯದ ಪಕ್ಕಾ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಗೊಂಡಿದ್ದು ಒಂದು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಕಾಪು ತಾಲೂಕು ಕುರ್ಕಾಲು ಗ್ರಾಮದ ಅರುಣ ಎಂಬವರ ಮನೆಯ ಜಾನುವಾರು ಕೊಟ್ಟಿಗೆ ಹಾಗೂ ಶೌಚಾಲಯ ಗಾಳಿಯಿಂದ ಹಾನಿಗೊಂಡಿದೆ.ಇನ್ನು ಬ್ರಹ್ಮಾವರ ತಾಲೂಕು ಕುಮ್ರಗೋಡು ಗ್ರಾಮದ ಕುಮಾರ ಗಾಣಿಗ ಎಂಬವರ ವಾಸದ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.

Edited By : PublicNext Desk
Kshetra Samachara

Kshetra Samachara

02/07/2022 09:28 pm

Cinque Terre

9.73 K

Cinque Terre

0

ಸಂಬಂಧಿತ ಸುದ್ದಿ