ಉಡುಪಿ: ಜಿಲ್ಲೆಯಾದ್ಯಂತ ಇಂದು ಕೂಡ ಮಳೆ ಮುಂದುವರೆದಿದೆ. ಮುಂಜಾನೆಯಿಂದ ಧಾರಾಕಾರ ಮಳೆಯಾಗುತ್ತಿದ್ದು ಬೆಳಿಗ್ಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜಿಗಳಿಗೆ ರಜೆ ಘೋಷಿಸಿತು.
ಇಂದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಸಿಲಾಗಿದ್ದು, ಬುಧವಾರದಿಂದ ಎರಡು ದಿನ ಯೆಲ್ಲೊ ಅಲರ್ಟ್ ಇದೆ. ಕರಾವಳಿ ತೀರದಲ್ಲಿ ಗಂಟೆಗೆ 40-50ರಿಂದ 60 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನೊಂದೆಡೆ ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು, ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರ ತೀರಕ್ಕೆ ತೆರಳುವವರು ನೀರಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.ಜಿಲ್ಲೆಯ ಬಹುತೇಕ ನದಿಗಳ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ.
Kshetra Samachara
05/07/2022 11:55 am