ಕಾಪು: ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಪರಿಸರದಲ್ಲಿ ಮಂಗಳವಾರವೂ ಕಡಲ್ಕೊರೆತ ತೀವ್ರಗೊಂಡಿದೆ. ಹತ್ತಕ್ಕೂ ಅಧಿಕ ತೆಂಗಿನ ಮರಗಳು ಸಮುದ್ರಕ್ಕೆ ಉರುಳಿ ಬಿದ್ದಿದ್ದು ಮತ್ತಷ್ಟು ಪ್ರದೇಶವನ್ನು ಸಮುದ್ರ ಆವರಿಸಿಕೊಂಡಿದೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರಾವಳಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಕೂಡಲೇ ಇಲ್ಲಿನ ಜನರ ಸಮಸ್ಯೆಗೆ ಸ್ಪಂದಿಸುವಂತೆ ಆಗ್ರಹಿಸಿದರು.
ಪುರಸಭೆ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ ಸುವರ್ಣ, ಆಸಿಫ್ ಮೂಳೂರು, ಪ್ರಮುಖರಾದ ಚಂದ್ರಪ್ಪ ಕುಕ್ಯಾನ್, ಮಹಾಲಿಂಗ ಅಂಚನ್, ಅಶೋಕ್ ನಾಯರಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
05/07/2022 05:29 pm