ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಮುಳೂರು ತೊಟ್ಟಮ್ ಕಡಲ್ಕೊರೆತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಕಾಪು‌: ತಾಲೂಕಿನ‌ ಮುಳೂರು ಸುತ್ತಮುತ್ತ ಭಾಗಗಳಲ್ಲಿ ತೀವ್ರತರವಾದ ಕಡಲ್ಕೊರೆತದಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಜಿಲ್ಲಾಧಿಕಾರಿ ಕೂರ್ಮ ರಾವ್ ಸಹಿತ ಅಧಿಕಾರಿಗಳೊಂದಿಗೆ ಸೇರಿಕೊಂಡು ಭೇಟಿ ನೀಡಿ, ಹಾನಿ ಪರಿಶೀಲಿಸಿದರು.‌

ಕೆಲವೆಡೆ ತುರ್ತಾಗಿ ತಡೆಗೋಡೆ ನಿರ್ಮಿಸುವ ಸಲುವಾಗಿ ಅನುದಾನ ಬಿಡುಗಡೆಗೊಳಿಸುವಂತೆ ಸರಕಾರವನ್ನು ಒತ್ತಾಯಿಸಲಾಗಿದ್ದು, ಅದರಂತೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ತಡೆಗೋಡೆ ನಿರ್ಮಿಸಲು ತುರ್ತಾಗಿ ಕೆಲಸ ಆರಂಭವಾಗ ಬೇಕಿರುವುದರಿಂದ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಶಾಸಕ ಲಾಲಾಜಿ ಆರ್. ಮೆಂಡನ್ ಸೂಚಿಸಿದರು.

ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಕಂದಾಯ ನೀರಿಕ್ಷಕರಾದ ಸುಧೀರ್ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಕಾಪು ಪೊಲೀಸ್ ಉಪನಿರಿಕ್ಷಕರು ಶ್ರೀಶೈಲಾ ಮುರುಗೋಡ್, ಮೀನುಗಾರಿಕೆ ಹಾಗೂ ಬಂದರು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

05/07/2022 10:37 pm

Cinque Terre

6.54 K

Cinque Terre

4

ಸಂಬಂಧಿತ ಸುದ್ದಿ