ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಸಂಬಂಧ ಪ್ರಾಕೃತಿಕ ವಿಕೋಪಕ್ಕೆ ತುರ್ತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಯಿತು. ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯ, ಜಿಲ್ಲೆ ಹಾಗೂ ಗ್ರಾಮೀಣ ರಸ್ತೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಸಮರ್ಪಕವಾದ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಶಿಶ್ ರೆಡ್ಡಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
07/07/2022 02:09 pm