ಉತ್ತರ ಕನ್ನಡ: ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡ ಸೇರಿದಂತೆ ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿದು ಮನೆಗಳಿಗೆ ನೀರು ನುಗ್ಗಿದೆ. ಮುರುಡೇಶ್ವರದಲ್ಲಿ ಭಾರಿ ಮಳೆಯಾಗುತ್ತಿದೆ. ಕಡಲಿನ ಆರ್ಭಟ ಜೋರಾಗಿದ್ದು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಸೂಚನೆ ಫಲಕವನ್ನುಅಳವಡಿಸಲಾಗಿದೆ.
ತಡರಾತ್ರಿಯಿಂದ ಸುರಿದ ಮಳೆಗೆ ರಸ್ತೆಯ ಮೇಲೆ ಹರಿದು ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಬಿಣಗಾ ಬಳಿ ಕಾರವಾರದಿಂದ ಮಂಗಳೂರು, ಹುಬ್ಬಳ್ಳಿ, ಶಿರಸಿ, ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಕೆಲ ಸಮಯ ಬಂದ್ ಆಗಿ ವಾಹನ ಸವಾರರು ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿತ್ತು. ಒಟ್ಟಾರೆ ಮಳೆಯ ಅಬ್ಬರ ಇಂದು ಮುಂದುವರಿದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
Kshetra Samachara
08/07/2022 10:18 pm