ಹೆಬ್ರಿ: ತಾಲೂಕಿನ ಆಗುಂಬೆ ಘಾಟ್ ನ ನಾಲ್ಕನೇ ತಿರುವಿನಲ್ಲಿ ಗುಡ್ಡ ಕುಸಿತದ ಪರಿಣಾಮ ಮರ ಧರೆಗುರುಳಿದೆ. ಹೀಗಾಗಿ
ತಾತ್ಕಾಲಿಕವಾಗಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.ಉಡುಪಿ ಶಿವಮೊಗ್ಗ ಜಿಲ್ಲೆಯನ್ನು ಸಂಪರ್ಕಿಸುವ ಪ್ರಮುಖ ಘಾಟ್ ಇದಾಗಿದೆ. ಗುಡ್ಡ ಕುಸಿತದ ಪರಿಣಾಮ ಸುಮಾರು ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತು.
ಸದ್ಯ ಮಣ್ಣು ಮತ್ತು ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.
PublicNext
10/07/2022 11:30 am