ಸುಳ್ಯ: ಇಂದು ಬೆಳಗ್ಗೆ ಸಂಭವಿಸಿದ ಲಘು ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಸ್ಕೇಲ್ ನಲ್ಲಿ 1.8 ದಾಖಲಾಗಿದೆ.
ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿರುವುದಾಗಿ ಹೇಳಲಾಗಿದೆ.ಜುಲೈ 10ರಂದು ಬೆಳಿಗ್ಗೆ 6 ಗಂಟೆ 22 ನಿಮಿಷ 30 ಸೆಕೆಂಡಿಗೆ ಈ ಭೂಕಂಪನ ದಾಖಲಾಗಿದೆ. ಅರಂತೋಡಿನ 1.1 ಕಿಲೋಮೀಟರ್ ವ್ಯಾಪ್ತಿಯಲ್ಲಿ 10 ಕಿ.ಮಿ.ಆಳದಲ್ಲಿ ಭೂಕಂಪನ ಸಂಭವಿಸಿದ್ದು, ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ 10.47 ಕಿ.ಮಿ. ವ್ಯಾಪ್ತಿಯಲ್ಲಿ, ಗೂನಡ್ಕ ಭಾಗದಲ್ಲಿ 1.3 ಕಿ.ಮಿ. ವ್ಯಾಪ್ತಿಯಲ್ಲಿ, ತೊಡಿಕಾನ ಭಾಗದಲ್ಲಿ 3.3 ಕಿ.ಮಿ. ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ ಎಂದು ವರದಿ ತಿಳಿಸಿದೆ.
Kshetra Samachara
10/07/2022 01:17 pm