ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೂಡಿನಬಳಿಯಲ್ಲಿ ಗುಡ್ಡ ಜರಿತ, ಅಪಾಯದಲ್ಲಿ ಮನೆಗಳು

ಬಂಟ್ವಾಳ: ನಿರಂತರ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ ಎಂಬಲ್ಲಿ ಗುಡ್ಡ ಜರಿತ ಉಂಟಾಗಿದ್ದು, ಜನತೆ ಆತಂಕದಲ್ಲಿದ್ದಾರೆ, ಇದು ಇನ್ನಷ್ಟು ಮುಂದುವರಿದರೆ, ಸುಮಾರು ನೂರರಷ್ಟು ಮನೆಗಳು ಸಂಪರ್ಕ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ಪೈಪ್ ಲೈನ್ ಮೇಲೆ ಬಿದ್ದರೆ, ಇಡೀ ಬಂಟ್ವಾಳಕ್ಕೆ ಸರಬರಾಜಾಗುವ ಕುಡಿಯುವ ನೀರಿನ ವ್ಯವಸ್ಥೆ ಸ್ಥಗಿತಗೊಳ್ಳುವ ಆತಂಕವಿದೆ.

ವರ್ಷದ ಹಿಂದೆಯೇ ಗುಡ್ಡ ಸ್ವಲ್ಪ ಮಟ್ಟಿಗೆ ಕುಸಿದಿತ್ತು. ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಭಾನುವಾರ ಗುಡ್ಡ ಮತ್ತಷ್ಟು ಕುಸಿದಿದೆ. ಇದರಿಂದ ಟಿಪ್ಪು ರಸ್ತೆ ಸಂಪೂರ್ಣ ಹಾನಿಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ. ಗುಡ್ಡ ಕುಸಿದ ಭಾಗ ಮಳೆಯಿಂದ ಮೃದುವಾಗಿ ಸ್ವಲ್ಪ ಸ್ವಲ್ಪ ಮಣ್ಣು ಜಾರುತ್ತಿದ್ದು ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಅಪಾಯ ಇದೆ. ಗುಡ್ಡ ಕುಸಿದ ಭಾಗದ ನೇರ ಕೆಳಗೆ ಎರಡು ಮನೆಗಳು ಇದ್ದು ಮನೆಮಂದಿ ಅಪಾಯವನ್ನು ಎದುರಿಸುತ್ತಿದ್ದಾರೆ.

ನಾಲ್ಕು ದಿನಗಳ ಹಿಂದೆ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟಿದ್ದು ಇದೇ ಮಾದರಿಯ ಭೀತಿಯನ್ನು ಗೂಡಿನಬಳಿ ಟಿಪ್ಪು ರಸ್ತೆಯ ಕೆಳಭಾಗದ ಜನತೆ ಎದುರಿಸುತ್ತಿದ್ದಾರೆ. ಗುಡ್ಡೆ ಕುಸಿತದಿಂದ ರಸ್ತೆ ಸಂಪೂರ್ಣವಾಗಿ ಕಡಿದು ಹೋಗಿದ್ದು 75ಕ್ಕೂ ಅಧಿಕ ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗುಡ್ಡ ಇನ್ನಷ್ಟು ಕುಸಿದರೆ ಇಲ್ಲಿಂದ ಹಾದುಹೋದ ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ವಾರ್ಡ್ ಗಳಿಗೆ ಕುಡಿಯುವ ನೀರು ಪೂರೈಸುವ ಪೈಪ್ ಗೆ ಹಾನಿಯಾಗಲಿದ್ದು 27 ವಾರ್ಡ್ ಗಳಿಗೂ ಕುಡಿಯುವ ನೀರು ಪೂರೈಕೆ ಕಡಿತಗೊಳ್ಳಲಿದೆ.

ಗುಡ್ಡ ಕುಸಿದ ಭಾಗಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯ ಪುರಸಭಾ ಸದಸ್ಯೆಯರಾದ ಝೀನತ್ ಫಿರೋಜ್ ಮತ್ತು ಸಂಶದ್ ಅವರ ನಿಯೋಗದಿಂದ ಜಿಲ್ಲಾಧಿಕಾರಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ ಸಲ್ಲಿಸಿದೆ. ಶಾಸಕರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸೋಮವಾರ ದುರಸ್ತಿ ಕೆಲಸ ಆರಂಭವಾಗಿದೆ ಎಂದು ಪುರಸಭಾ ಸದಸ್ಯೆ ಝೀನತ್ ಫಿರೋಜ್ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

11/07/2022 06:58 pm

Cinque Terre

3.67 K

Cinque Terre

0

ಸಂಬಂಧಿತ ಸುದ್ದಿ