ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗ್ತಿದೆ. ಮಂಗಳೂರು ನಗರದ ಕೊಡಿಯಾಲಬೈಲ್ ನಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು ಬೈಕ್ ,ಕಾರು ಜಲಾವೃತಗೊಂಡಿದೆ. ಪಂಪ್ ವೆಲ್ ಅಂಡರ್ ಪಾಸ್ ನಲ್ಲಿ ನೀರು ತುಂಬಿ ವಾಹನ ಸವಾರರು ಪರದಾಟ ನಡೆಸಿದ್ರು.
ರೈಲ್ವೆ ನಿಲ್ದಾಣ ಮುಂಭಾಗದಲ್ಲಿ ನೀರು ನುಗ್ಗಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆಯಾಗ್ತಿದೆ.ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ, ಮೂಡುಬಿದಿರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ.ಉಳಿದಂತೆ ಪುತ್ತೂರು ,ಸುಳ್ಯ, ಬೆಳ್ತಂಗಡಿ ನಲ್ಲಿ ವ್ಯಾಪ್ತಿಯಲ್ಲಿ ತಹಶೀಲ್ದಾರರು ,ಬಿಇಒ ಅಲ್ಲಿನ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದ್ದಾರೆ.
Kshetra Samachara
30/07/2022 10:00 am