ಮಂಗಳೂರು: ದ.ಕ.ಜಿಲ್ಲೆಯಲ್ಲಿ ಆ.5ರವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಳೆ ಇನ್ನೂ ಬಿರುಸು ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿನ್ನೆ ಸುಳ್ಯ ಹಾಗೂ ಕಡಬ ತಾಲೂಕು ಹೊರತುಪಡಿಸಿ ಜಿಲ್ಲೆಯ ಬೇರೆಡೆಯಲ್ಲಿ ಸಾಮಾನ್ಯ ಮಳೆಯಾಗಿದೆ. ರೆಡ್ ಅಲರ್ಟ್ ಇರುವ ಸಮಯದಲ್ಲಿ ಭಾರೀ ಮಳೆಯಾಗಲಿದ್ದು, ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಆದ್ದರಿಂದ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಇಂದು ಬೆಳಗ್ಗೆಯೂ ಕೂಡ ಮೋಡ ಮುಸುಕಿದ ವಾತಾವರಣ ಕಂಡುಬಂದಿದೆ.
Kshetra Samachara
03/08/2022 10:33 am