ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಗುಂಡಿ ತೆಗೆಯುವಾಗ ಗುಹೆಯಲ್ಲಿ ಪ್ರಾಚೀನ ಪರಿಕರಗಳು ಪತ್ತೆ

ಸುಳ್ಯ: ಗುಡ್ಡದಲ್ಲಿ ಗುಂಡಿ ತೆಗೆಯುವಾಗ ಗುಹೆಯೊಂದು ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.

ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ರಬ್ಬರ್ ತೋಟ ತೆರವು ಮಾಡಿ ಅಡಿಕೆ ತೋಟದ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಿಕೆ ಗುಂಡಿ ತೆಗೆಯುವಾಗ ಇವು ಕಾಣಸಿಕ್ಕಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲವಾದ ಭಾಗ ಗೋಚರಿಸಿದ್ದು ಇಲ್ಲಿ ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರೊಳಗಡೆ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿವೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆ ಕಂಡುಬಂದಿದೆ.

ಪುರಾತನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದು ಎಂಬ ಮಾತು ಸ್ಥಳೀಯವಾಗಿ ಕೇಳಿಬರುತ್ತಿದೆ. ಉಡುಪಿಯ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್, ಪ್ರಾಚ್ಯವಸ್ತು ಸಂಶೋಧಕ ಪ್ರೊ.ಟಿ.ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ. ಈಗಾಗಲೇ ಪರಿಕರಗಳನ್ನು ತೊಳೆದು ಸ್ವಚ್ಛಗೊಳಿಸಿದ್ದೇವೆ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಹಿತಿ ನೀಡುವುದಾಗಿ ಅವರು ಹೇಳಿದ್ದಾರೆ.

Edited By : Vijay Kumar
Kshetra Samachara

Kshetra Samachara

27/08/2022 06:53 pm

Cinque Terre

2.54 K

Cinque Terre

1

ಸಂಬಂಧಿತ ಸುದ್ದಿ