ಸುಳ್ಯ: ಸಂಪಾಜೆ, ಕೊಯನಾಡು ಮಾತ್ರವಲ್ಲದೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು, ಕೊಲ್ಲಮೊಗ್ರು ಭಾಗದಲ್ಲಿಯೂ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಭಾರೀ ಜಲಪ್ರವಾಹ ಉಂಟಾಗಿದ್ದು ಜಲ ಸ್ಪೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.
ಕಲ್ಮಕಾರು ಪರಿಸರದ ಗುಳಿಕ್ಕಾನ, ಹಾಗೂ ಕಡಮಕಲ್ ಎಸ್ಟೇಟ್ ಭಾಗದಲ್ಲಿ ಜಲಸ್ಪೋಟ ಸಂಭವಿಸಿರುವ ಸಾಧ್ಯತೆ ಇದ್ದು ಇದರಿಂದಾಗಿ ಭಾರೀ ಪ್ರಮಾಣದ ಮರಗಳು ನೀರಿನಲ್ಲಿ ಕೊಚ್ಚಿ ಬಂದು ಶೇಖರವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Kshetra Samachara
29/08/2022 10:36 am