ಕಾಪು : ಅದಮಾರು ಹಿಂದೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಲಕ್ಷಾಂತರ ರೂಪಾಯಿ ಮೊತ್ತದ ಸೊತ್ತು ನಷ್ಟ ಉಂಟಾಗಿದೆ. ಆದ್ರೆ ಬುಧವಾರ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.
ಶಾಲೆಯ ಹಿಂಬದಿಯ ಗೋಡೆಗೆ ಸಿಡಿಲು ಬಡಿದಿದ್ದು, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಶಾಲಾ ಆಡಳಿತ ಮಂಡಳಿಯು ಅಧಿಕಾರಿಗಳನ್ನ ಸಂಪರ್ಕಿಸಿ, ಬಳಿಕ ಶಾಲಾ ಮಕ್ಕಳಿಗೆ ರಜೆ ಘೋಷಿಸಿದೆ.ಈ ಸಂದರ್ಭ ಎಲ್ಲೂರು ಗ್ರಾಮಕರಣಿಕ ಸುನಿಲ್, ಪಂಚಾಯತ್ ಸದಸ್ಯ ಸಂತೋಷ್ ಶೆಟ್ಟಿ ಕುಂಜೂರು, ಸಂತೋಷ್ ಶೆಟ್ಟಿ ಬರ್ಪನಿ, ಮುಖ್ಯ ಶಿಕ್ಷಕಿ ದೇವಿಕಾ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
01/09/2022 02:13 pm