ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರೀ ಮಳೆ ಸಾಧ್ಯತೆ: ಕರಾವಳಿಯಲ್ಲಿ ಮುಂದಿನ ಮೂರು ದಿನ ಎಲ್ಲೋ ಅಲರ್ಟ್!

ಕುಂದಾಪುರ: ರಾಜ್ಯದಲ್ಲಿ ಮುಂದಿನ ವಾರವೂ ಸಹ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ವಾರ 6 ಹಾಗೂ 7ನೇ ತಾರೀಕಿನಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಮುಂದಿನ ಐದೂ ದಿನವೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್, ಸೋಮವಾರದಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

Edited By : Nirmala Aralikatti
Kshetra Samachara

Kshetra Samachara

04/09/2022 01:30 pm

Cinque Terre

3.2 K

Cinque Terre

0

ಸಂಬಂಧಿತ ಸುದ್ದಿ