ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ಸೆ.8. ಮತ್ತು ಸೆ.9 ರಂದು ಕರಾವಳಿ ಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಜಿಲ್ಲಾಡಳಿತ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದು, ನದಿ ತೀರಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
Kshetra Samachara
06/09/2022 09:28 pm