ಕಾರವಾರ: ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಶಿರಸಿ– ಕುಮಟಾ ರಸ್ತೆಯಲ್ಲಿ ಅಕ್ಟೋಬರ್ 12ರಿಂದ 18 ತಿಂಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.
ಪರ್ಯಾಯ ರಸ್ತೆಗಳು: ಕುಮಟಾದಿಂದ ಸಿದ್ದಾಪುರದ ಮೂಲಕ ಸಾಗಿ ಶಿರಸಿಗೆ ತಲುಪಬಹುದು. ಅಂಕೋಲಾದಿಂದ ಯಲ್ಲಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಾಗಿ ರಾಜ್ಯ ಹೆದ್ದಾರಿ 93ರಲ್ಲಿ ಶಿರಸಿಗೆ ಹೋಗಬಹುದು. ಹೊನ್ನಾವರದಿಂದ ಮಾವಿನಗುಂಡಿ ಮೂಲಕ ಸಾಗಿ ಸಿದ್ದಾಪುರಕ್ಕೆ ಹೋಗಿ ಶಿರಸಿಗೆ ತಲುಪಬಹುದು. ಕುಮಟಾ-ಸಿದ್ದಾಪುರ-ಶಿರಸಿ ಮಾರ್ಗದಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದ ರಸ್ತೆಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
Kshetra Samachara
10/10/2020 12:51 pm