ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಕುಸುಮೋದರ ಶೆಟ್ಟಿ ಅವರಿಗೆ ವಿಟ್ಲದಲ್ಲಿ ಸನ್ಮಾನ

ಬಂಟ್ವಾಳ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಭವಾನಿ ಫೌಂಡೇಶನ್ ಟ್ರಸ್ಟ್ ನ ಕುಸುಮೋದರ ದೇರಣ್ಣ ಶೆಟ್ಟಿ ಚೆಲ್ಲಡ್ಕ ಅವರನ್ನು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಮತ್ತು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸನ್ಮಾನಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ದೇವಸ್ಥಾನ ಆಡಳಿತ ಮೊಕ್ತೇಸರ ಸದಾಶಿವ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ .ಎನ್. ಕೂಡೂರು ಸ್ವಾಗತಿಸಿದರು. ಸುಬ್ರಾಯ ಪೈ ವಂದಿಸಿದರು. ಯಶವಂತ ವಿಟ್ಲ ನಿರೂಪಿಸಿದರು.

Edited By : Nagaraj Tulugeri
Kshetra Samachara

Kshetra Samachara

30/10/2020 04:34 pm

Cinque Terre

13.68 K

Cinque Terre

0

ಸಂಬಂಧಿತ ಸುದ್ದಿ