ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಪ್ರವಾದಿ ಆದರ್ಶ ಪಾಲಿಸಿದರೆ ವ್ಯಕ್ತಿತ್ವ ಪ್ರಜ್ವಲನೆ, ಸನ್ಮಾರ್ಗ ಗೋಚರ"

ಉಡುಪಿ: ಪ್ರವಾದಿ ಅವರ ಎಲ್ಲ ಆದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳುವ ಮೂಲಕ ನಮ್ಮ ವ್ಯಕ್ತಿತ್ವ ಪ್ರಜ್ವಲಿಸಿ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ. ಸಮಾಜದಲ್ಲಿ ಸೌಹಾರ್ದತೆ ವಾತಾವರಣ ನಿರ್ಮಾಣ ಆಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಡುಪಿ ತಾಲೂಕು ಘಟಕ ವತಿಯಿಂದ ಉಡುಪಿ ಅಮ್ಮಣಿ ರಾಮಣ್ಣಿ ಶೆಟ್ಟಿ ಮಿನಿ ಹಾಲ್‍ನಲ್ಲಿ ನಡೆದ ಮಾನವತೆಯ ಪ್ರತಿಪಾದಕ ಪ್ರವಾದಿ ಮುಹಮ್ಮದ್ (ಸ.ಅ.)ರ ಜೀವನ ಮತ್ತು ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನವತೆಯೇ ಶ್ರೇಷ್ಠ ಎಂಬುದು ಎಲ್ಲ ಧರ್ಮಗಳ ಸಾರ. ಪ್ರೀತಿಯೇ ಮುಖ್ಯ ಎಂಬುದನ್ನು ಪ್ರವಾದಿ ಮುಹಮ್ಮದ್ ಸೇರಿದಂತೆ ಎಲ್ಲ ದಾರ್ಶನಿಕರು ತೋರಿಸಿ ಕೊಟ್ಟಿದ್ದಾರೆ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಹೇಳಿದರು.

ಮಲ್ಪೆ ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿಯ ಖತೀಬ್ ಮೌಲಾನ ಇಮ್ರಾನುಲ್ಲಾ ಖಾನ್ ಮನ್ಸೂರಿ ವಿಷಯ ಮಂಡಿಸಿದರು. ಅಲೆವೂರು ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ದಿನೇಶ್ ಕಿಣಿ ಮುಖ್ಯ ಅತಿಥಿಯಾಗಿದ್ದರು.

Edited By : Nagaraj Tulugeri
Kshetra Samachara

Kshetra Samachara

21/11/2020 08:37 pm

Cinque Terre

14.7 K

Cinque Terre

4

ಸಂಬಂಧಿತ ಸುದ್ದಿ