ಪೊಲಿಪು ಸರ್ಕಲ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅನಾಹುತ ಉಂಟಾಗಿ ಲಕ್ಷಾಂತರ ರೂಪಾಯಿ ವೆಚ್ಚದ ಸೊತ್ತು ನಷ್ಟ ಉಂಟಾಗಿದೆ.
ಪೊಲಿಪು ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ನಲ್ಲಿ ವಾಸವಿರುವ ಗುರುರಾಜ್ ಮತ್ತು ಶಕೀಲಾ ಎಂಬುವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿದೆ. ಘಟನೆಯಿಂದಾಗಿ ಗುರುರಾಜ್ ಅವರ ಮನೆಯೊಳಗಿನ ವಸ್ತುಗಳೆಲ್ಲಾ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಸೊತ್ತು ನಷ್ಟ ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.
PublicNext
12/08/2022 03:46 pm