ಕಿನ್ನಿಗೋಳಿಯ ಯುಗಪುರುಷ ಶ್ರೀ ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಗುರುಗಳ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಶನಿವಾರ ಪ್ರಾತಕಾಲ ವಿಶೇಷ ಪ್ರಾರ್ಥನೆ ,ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಮಹಾ ಅನ್ನ ಸಂತರ್ಪಣೆ ನಡೆಯಿತು.
ಭಾನುವಾರ ಆ. 14 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಾಮೂಹಿಕ ಅಷ್ಟೋತ್ತರ ಶತ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ , ಮಹಾಪೂಜೆ ನಡೆಯಲಿದೆ ಎಂದು ಯುಗಪುರುಷದ ಭುವನಾಭಿರಾಮ ಉಡುಪ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ,ಶಾಸಕ ಉಮಾನಾಥ ಕೋಟ್ಯಾನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು ಮತ್ತಿತರರು ಶ್ರೀ ರಾಘವೇಂದ್ರ ಸನ್ನಿಧಿಗೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
Kshetra Samachara
13/08/2022 04:33 pm