ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಆಗಸ್ಟ್ 15 ರಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚಿನ 50ನೇ ವರ್ಷದ ಆಚರಣೆಯನ್ನು ಕೂಡ ನಡೆಸಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವು ಪ್ರಪಂಚಾದಾದ್ಯಂತ ಬಹಳ ಪ್ರಸಿದ್ದವಾಗಿದ್ದು ವೆಲಂಕಣಿ ಮಾತೆಯ ಪ್ರತಿಮೆಯನ್ನು 1988 ಅಗಸ್ಟ್ 15 ರಂದು ಉಡುಪಿ ಚರ್ಚ್ ನಿಂದ ಮೆರವಣಿಗೆಯಲ್ಲಿ ತರಲಾಗಿತ್ತು. ಈ ಪ್ರತಿಮೆಯನ್ನು ವಂ. ವಿಲ್ಸನ್ ಡಿಸೋಜಾ ಅವರು ಕೊಡುಗೆಯಾಗಿ ನೀಡಿದ್ದರು ಮತ್ತು ಈ ಪ್ರತಿಮೆಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತರಲಾಗಿತ್ತು ಎಂದು ಮಾಹಿತಿ ನೀಡಿದರು.
ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು 15 ಅಗಸ್ಟ್ 2022 ರಂದು ಉಡುಪಿ ಧರ್ಮ ಪ್ರಾಂತ್ಯದ ಪುಣ್ಯಕ್ಷೇತ್ರವೆಂದು ಅಧಿಕೃತವಾಗಿ ಘೋಷಿಸಲಾಗುವುದು. ಈ ಧಾರ್ಮಿಕ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ಕೃತಜ್ಞಾತಾ ಪೂರ್ವಕವಾಗಿ ದಿವ್ಯ ಬಲಿಪೂಜೆಯ ಮುಖಾಂತರ ನಡೆಯಲಿರುವುದು ಎಂದರು.
Kshetra Samachara
03/08/2022 07:48 pm