ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ರಾತ್ರಿ ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಮೂಲತಃ ಮುಂಬೈಯಲ್ಲಿ ನೆಲೆಸಿರುವ ಸುನಿಲ್ (40) ಎಂದು ಗುರುತಿಸಲಾಗಿದೆ.
ಮೃತ ಸುನಿಲ್ ಕಳೆದ ಹಲವಾರು ವರ್ಷಗಳಿಂದ ಮುಂಬೈಯಲ್ಲಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ಕಳೆದ ವರ್ಷದ ಹಿಂದೆ ಮುಲ್ಕಿಯ ಕೆ.ಎಸ್ ರಾವ್ ನಗರದ ಲಿಂಗಪ್ಪಯ್ಯ ಕಾಡು ಬಳಿಯ ತಮ್ಮ ಸಂಬಂಧಿಕರ ಮನೆಗೆ ಬಂದು ನೆಲೆಸಿದ್ದ. ಬುಧವಾರ ರಾತ್ರಿ ಕೂಲಿ ಕೆಲಸ ಮುಗಿಸಿ ರಾತ್ರಿ ನಡೆದುಕೊಂಡು ಹೋಗುತ್ತಿರುವಾಗ ಭಾರಿ ಮಳೆಗೆ ಆಯತಪ್ಪಿ, ಚರಂಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಈ ಸಂದರ್ಭ ತಲೆಗೆ ಗಾಯಗಳಾಗಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
PublicNext
30/06/2022 12:53 pm