ರಾಷ್ಟ್ರೀಯ ಹೆದ್ದಾರಿ 66 ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆ ತರುವಲ್ಲಿ ಸಹಕರಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
02/07/2022 04:10 pm