ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪ್ರಥಮ ಏಕಾದಶಿಯ ಭಕ್ತಿ ಖುಷಿ; ಮಠಾಧೀಶರಿಂದ ತಪ್ತಮುದ್ರಾಧಾರಣೆ

ಶ್ರೀಕೃಷ್ಣಮಠವೂ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಮಠಾಧೀಶರುಗಳು ಪ್ರಥಮ ಏಕಾದಶಿಯಂದು ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಸಿದರು.

ಶ್ರೀಕೃಷ್ಣಮಠದಲ್ಲಿ ಬೆಳಗ್ಗೆ ಮಹಾಪೂಜೆ ಪೂರೈಸಿದ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಅಪರಾಹ್ನದವರೆಗೆ ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನಡೆಸಿದರು.

ಮುದ್ರಾಧಾರಣೆಗಾಗಿ ಬಂದ ಭಕ್ತರ ಉದ್ದದ ಸರತಿ ಸಾಲು ಶ್ರೀಕೃಷ್ಣಮಠದ ಮುಂಭಾಗದಲ್ಲಿತ್ತು. ಮುದ್ರಾಧಾರಣೆ ಮಾಡುವ ಮುನ್ನ ವೈದಿಕರು ಸುದರ್ಶನ ಹೋಮ ನಡೆಸಿದರು. ಅದರಲ್ಲಿ ಬಿಸಿ ಮಾಡಿದ ಶಂಖ- ಚಕ್ರ ಚಿಹ್ನೆಯನ್ನು ಮಠಾಧೀಶರು ಭಕ್ತರ ತೋಳಿನಲ್ಲಿ ಮುದ್ರಿಸಿದರು.

Edited By :
Kshetra Samachara

Kshetra Samachara

11/07/2022 08:02 pm

Cinque Terre

4.84 K

Cinque Terre

0

ಸಂಬಂಧಿತ ಸುದ್ದಿ