ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಗುರುಪೂರ್ಣಿಮೆ ಪ್ರಯುಕ್ತ ವಿಶೇಷ ಪ್ರಾರ್ಥನೆ; ಭಜನಾ ಕಾರ್ಯಕ್ರಮಕ್ಕೆ ಚಂದ್ರಶೇಖರ ಸ್ವಾಮೀಜಿ ಚಾಲನೆ

ಮುಲ್ಕಿ ಸಮೀಪದ ಕೊಲಕಾಡಿ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವೇ.ಮೂ.ವಾದಿರಾಜ ಉಪಾಧ್ಯಾಯ ಮಾರ್ಗದರ್ಶನದಲ್ಲಿ ಗುರು ಪೂರ್ಣಿಮಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಉತ್ಸವದ ಅಂಗವಾಗಿ ಪ್ರಾತಕಾಲ ವಿಶೇಷ ಪ್ರಾರ್ಥನೆ ಕಾಕಡ ಆರತಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಭಜನಾ ಕಾರ್ಯಕ್ರಮಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿ ಮಾತನಾಡಿ ಭಕ್ತಿ ಭಾವದ ಭಜನೆ ಮೂಲಕ ಲೋಕಕಲ್ಯಾಣ ಸಾಧ್ಯ ಎಂದರು.

ಈ ಸಂದರ್ಭ ಆಶ್ರಮದ ನಿರ್ದೇಶಕ ರಾಹುಲ್ ಸಿ. ಭಟ್, ಸಂಚಾಲಕ ಪುನೀತ್ ಕೃಷ್ಣ, ಮಂದಿರದ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಅಧ್ಯಕ್ಷ ಈಶ್ವರ್ ಎಲ್ ಶೆಟ್ಟಿ ಮುನ್ನಾಲಯಗುತ್ತು ಬಂಟ್ವಾಳ, ಕೋಶಾಧಿಕಾರಿ ರಂಗನಾಥ ಶೆಟ್ಟಿ, ಕಾರ್ಯದರ್ಶಿ ಶ್ರೀಧರ ಕೋಟ್ಯಾನ್ , ಜಯಶ್ರೀ ಕೋಟ್ಯಾನ್, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಪುಷ್ಪರಾಜ ಕೊಲಕಾಡಿ, ಯತೀಶ್, ಗುಣಪಾಲ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸ್ವಾಮೀಜಿಯವರನ್ನು ಮಂದಿರದ ವತಿಯಿಂದ ಗೌರವಿಸಲಾಯಿತು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆದು ಗುರುಪಾದುಕ ಪೂಜೆ, ಮಹಾ ಮಂಗಳಾರತಿ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಾಸ್ಕರ್ ಕಾಂಚನ್ ಬಳಗದವರಿಂದ ಸ್ಯಾಕ್ಸೋ ಫೋನ್ ವಾದನ ನಡೆಯಿತು. ರಾತ್ರಿ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.

Edited By :
Kshetra Samachara

Kshetra Samachara

13/07/2022 11:53 am

Cinque Terre

9.53 K

Cinque Terre

1