ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ವಿಟ್ಲ ಪೊಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್ ಮತ್ತು ಹಾಳೆ ತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
Kshetra Samachara
21/07/2022 12:59 pm