ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಪ್ರಸಿದ್ಧ ಯಾತ್ರಿಸ್ಥಳ ಕಾರಿಂಜಕ್ಕೂ ತಟ್ಟಿದ ಕೋವಿಡ್ ಕಾಟ, ಆಟಿ ಅಮಾವಾಸ್ಯೆ ತೀರ್ಥಸ್ನಾನಕ್ಕೆ ನಿಷೇಧ

ಬಂಟ್ವಾಳ: ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಸರಕಾರದ ನಿರ್ದೇಶನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು, ಬಂಟ್ವಾಳ ತಾಲೂಕು ಕಾರಿಂಜದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಪ್ರಕಟನೆಯಲ್ಲಿ ತಿಳಿಸಿದೆ.

ಆ.8 ರಂದು ಆಟಿ ಅಮಾವಾಸ್ಯೆಯಂದು ಭಕ್ತಾದಿಗಳು ಇಲ್ಲಿನ ಗದಾ ತೀರ್ಥದಲ್ಲಿ ತೀರ್ಥಸ್ನಾನ ನಡೆಸಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಆದರೆ ಕೋವಿಡ್ ನಿಯಂತ್ರಣಕ್ಕಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವುದರಿಂದ ತೀರ್ಥಸ್ನಾನಕ್ಕೆ ಅವಕಾಶ ನೀಡಲಾಗುವುದಿಲ್ಲ. ನಿಯಮ ಪಾಲನೆ ಅನುಷ್ಠಾನಕ್ಕಾಗಿ ಆ ದಿನದಂದು ಗದಾ ತೀರ್ಥದ ಸುತ್ತ ಪೊಲೀಸ್ ಬಂದೋಬಸ್ತ್ ಎರ್ಪಡಿಸಲಾಗುವುದು, ಭಕ್ತಾಧಿಗಳು ಸಹಕರಿಸಬೇಕಾಗಿ ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/08/2021 05:10 pm

Cinque Terre

8.66 K

Cinque Terre

0

ಸಂಬಂಧಿತ ಸುದ್ದಿ