ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುತಾತ್ಮ ಸೈನಿಕರ ಸ್ಮಾರಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ: ಅಜ್ಜರಕಾಡಿನ ಹುತಾತ್ಮ ಸೈನಿಕರ ಸ್ಮಾರಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಹುತಾತ್ಮ ಸೈನಿಕರಿಗೆ ಗೌರವ ನಮನವನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಸೈನ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯೋಧರಾದ ಸುಬ್ರಹ್ಮಣ್ಯ ಉಪಾಧ್ಯಾಯರ ಧರ್ಮಪತ್ನಿ ದಿವ್ಯ ಉಪಾಧ್ಯಾಯರನ್ನು ಅಭಿನಂದಿಸಿ ಗೌರವಿಸಿದರು.ಇನ್ನೋರ್ವ ಯೋಧ ರಾಧಾಕೃಷ್ಣ ಇವರ ತಾಯಿ ಸಾವಿತ್ರಿ ಯವರನ್ನು ಗೌರವಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಶಾಸಕರಾದ ಕೆ ರಘುಪತಿ ಭಟ್, ಮಾಜಿ ಸೈನಿಕರ ವೇದಿಕೆಯ ಅಧ್ಯಕ್ಷರಾದ ಕರ್ನಲ್ ರೋಡ್ರಿಗಸ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ,ವಿಧಾನಪರಿಷತ್ ಸದಸ್ಯರಾದ ಮುನಿರಾಜು ಗೌಡ, ಮಾಜಿ ಸೈನಿಕರ ವೇದಿಕೆಯ ಪ್ರಮುಖರಾದ ಸುಭಾಷ್ ಕೊರಂಗ್ರಪಾಡಿ ,ಗಣೇಶ್ ರಾವ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸಂಯೋಜಕ ಬೈಕಾಡಿ ಸುಪ್ರಸಾದ್ ಶೆಟ್ಟಿ ನಿರ್ವಹಿಸಿ ಪ್ರಾಸ್ತಾವಿಕ ಮಾತನಾಡಿದರು.ಶ್ರೀಮತಿ ಶಿಲ್ಪಾ ಜಿ ಸುವರ್ಣ ಸ್ವಾಗತಿಸಿದರು. ಗುರುಪ್ರಸಾದ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

Edited By : PublicNext Desk
Kshetra Samachara

Kshetra Samachara

19/08/2021 03:17 pm

Cinque Terre

3.78 K

Cinque Terre

0

ಸಂಬಂಧಿತ ಸುದ್ದಿ