ಗುರುಪುರ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗ್ಲೆಗುಡ್ಡೆಯಲ್ಲಿ ದಕ ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು(ಗ್ರಾಮಾಂತರ) ಹಾಗೂ ಗುರುಪುರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಲೋಕೋಪಯೋಗಿ ಇಲಾಖೆಯ ನಬಾರ್ಡ್ ಆರ್ ಐಡಿಎಫ್ 25ನೇ ಯೋಜನೆಯಡಿ 16 ಲಕ್ಷ ರೂ ಅನುದಾನದಲ್ಲಿ ನಿರ್ಮಿಸಲಾದ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು.
ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪತಹಶೀಲ್ದಾರ್ ಶಿವಪ್ರಸಾದ್, ಕಂದಾಯ ನಿರೀಕ್ಷಕ ನವನೀತ ಮಾಳವ, ದಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಾಪಾ ಬೋವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಗ್ರಾಮಾಂತರ) ಶೈಲಾ ಕೆ ಕಾರಗಿ, ಬಾಲ ವಿಕಾಸ ಸಮಿತಿ ಅಧ್ಯಕ್ಷ ಸಂಶದ್, ಅಂಗನವಾಡಿ ಮೇಲ್ವಿಚಾರಕಿ,ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಮಕ್ಕಳು, ಪಾಲಕರು , ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
19/08/2021 04:49 pm