ಬಜಪೆ:ಕೇಂದ್ರ ಸರ್ಕಾರದ ಮಹತ್ವ ದ ಯೋಜನೆಗಳಲ್ಲೊಂದಾದ ಜಲ ಜೀವನ ಮಿಷನ್ ಯೋಜನೆಯಡಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿಗೆ ನಲ್ಲಿ ನೀರು ಅನುಷ್ಠಾನಗೊಳಿಸುವ ಆಶಯದಿಂದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಟಿಕಂಬ್ಲ ಎಂಬಲ್ಲಿ 2.92 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕಡಾ ವೈ ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಗೌಡ ಮುಚ್ಚೂರು, ಪಡು ಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಸೇಸಮ್ಮ, ಪಂಚಾಯತ್ ಪಿಡಿಓ ಉಗ್ಗಪ್ಪ ಮೂಲ್ಯ, ಪಂಚಾಯತ್ ಸದಸ್ಯರಾದ ಅರುಣ್ ಕೋಟ್ಯಾನ್, ವಿದ್ಯಾಜೋಗಿ, ಮೋಹಿನಿ, ಸೀತಾರಾಮ, ಗಣ್ಯಾತೀಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
03/09/2021 04:42 pm